ಜಿಲ್ಲೆಯಲ್ಲಿ ಪಕ್ಷ ಬಲಪಡಿಸಲು ನನಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ- ಹಿರಿಯ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ. ಚಿತ್ರದುರ್ಗ,ಮೇ,14,2022(..):ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇದ್ದು ಈ ನಡುವೆ ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಾಗಿದೆ. ಈ ಮಧ್ಯೆ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚಿಸಿದ್ದು ಶೀಘ್ರವೇ ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ. ಇನ್ನು ಹಿರಿಯ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯಲ್ಲಿ ಪಕ್ಷ ಬಲಪಡಿಸಲು ನನಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡಲ್ಲ. ನನ್ನ ಬಗ್ಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಒಳ್ಳೆಯ ಅಭಿಪ್ರಾಯವಿದೆ. ಹೀಗಾಗಿ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ತಿಪ್ಪಾರೆಡ್ಡಿ ತಿಳಿಸಿದ್ದಾರೆ. : - – -- .