ಪಿಎಸ್ ಐ ನೇಮಕಾತಿ ಹಗರಣ: ಬಂಧಿತ ಡಿವೈಎಸ್ಪಿ 12 ದಿನಗಳ ಕಾಲ ಸಿಐಡಿ ಕಸ್ಟಡಿಗೆ. ಬೆಂಗಳೂರು,ಮೇ,13,2022(..):ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಡಿವೈಎಸ್ಪಿ ಶಾಂತಕುಮಾರ್ ಅವರನ್ನ 12 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಡಿವೈಎಸ್ಪಿಯಾಗಿದ್ದ ಶಾಂತಕುಮಾರ್ ರನ್ನು ಸಿಐಡಿ ನಿನ್ನೆ ಬಂಧಿಸಿ ಇಂದು ನ್ಯಾಯಾಲಯದ ಎದುರು ಹಾಜರುಪಡಿಸಿತ್ತು. ಇದೀಗ ಶಾಂತಕುಮಾರ್ ರನ್ನು 12 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ . ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಅಂತರಿಕ ಭದ್ರತಾ ವಿಭಾಗದಲ್ಲಿದ್ದ ಶಾಂತಕುಮಾರ್ ನಿಯೋಜನೆ ಮೇರೆಗೆ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಪಿಎಸ್ ಐ ಅಕ್ರಮ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಆತಂರಿಕ ಭದ್ರತಾ ವಿಭಾಗಕ್ಕೆ ಅವರನ್ನ ಕಳುಹಿಸಲಾಗಿತ್ತು. : - –- - – 12 -- .