ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈವರೆಗೆ ಉತ್ತಮ ಮಳೆ,ಇದು ಶುಭ ಸೂಚಕ- ಮಾಜಿ ಸಿಎಂ ಹೆಚ್.ಡಿಕೆ. ಮೈಸೂರು,ಮೇ,13,2022(..):ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈವರೆಗೆ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದರು. ಇಂದು ಬೆಂಗಳೂರಿನಲ್ಲಿ ಜಲಧಾರೆ ಕಾರ್ಯಕ್ರಮ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಳೆಯ ನಡುವೆಯೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಜಲಧಾರೆ ಕಾರ್ಯಕ್ರಮ ಯಶಸ್ವಿಯಾಗಲೆಂದು ದೇವರ ಬಳಿ ಪ್ರಾರ್ಥನೆ ಮಾಡಿದರು. ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ಸಾರಾ ಮಹೇಶ್, ಮಂಜೇಗೌಡ ಹಾಗೂ ಸ್ಥಳೀಯ ಕಾರ್ಯಕರ್ತರು ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಇಂದು ನಡೆಯುವ ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿ ಆಗಲೆಂದು ತಾಯಿ ಚಾಮುಂಡೇಶ್ವರಿ ಬಳಿ ಬೇಡಿದ್ದೇನೆ. ತಾಯಿ ಅನುಗ್ರಹದಿಂದ ಸಮಾವೇಶ ಯಶಸ್ವಿ ಆಗುತ್ತೆ. ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸ್ಸನ್ನು ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ. ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು. ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೆ ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರೊಡನೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಹೆಚ್.ಡಿಕೆ ತಿಳಿಸಿದರು. : - --- …. , ’ – , 13, 2022 (..): .. ‘ ’ . ‘ ’ . . . , , . , ‘ ’ . “ . ’ . , ,” . , , “ . .. . . .”: .. / / / /