ಪುತ್ರನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ ಬೆಂಗಳೂರು,ಜುಲೈ,13,2024 (..):ತಾಯಿಯೊಬ್ಬಳು ಮಗನನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಯಲಂಕದ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ.ತಾಯಿ ರಮ್ಯಾ (40) ಎಂಬಾಕೆಯೇ ತನ್ನ ಮಗ ಭಾರ್ಗವ್ (13)ನನ್ನು ಕೊಲೆ ಮಾಡಿ ಬಳಿಕ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಮೂರು ತಿಂಗಳ ಹಿಂದೆ ರಮ್ಯಾ ಪತಿ ಶ್ರೀಧರ್ ಕ್ಯಾನ್ಸರಿಂದ ಮೃತಪಟ್ಟಿದ್ದರು. ಹೀಗಾಗಿ ಈ ಘಟನೆಯಿಂದ ರಮ್ಯಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಪುತ್ರನನ್ನು ಮೊದಲು ಕೊಲೆಗೈದು ನಂತರ ರಮ್ಯ ನೇಣಿಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : , , ,