ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಮೇ,12,2022(..):ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ವಿಧಾನಸಭೆದಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾಯಿತು. ಆದರೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಆಗಿರಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತೇವೆ ಎಂದರು. ಸ್ಥಳೀಯ ಸಂಸ್ಥೆಗೆ ಚುನಾವಣೆ ನಡೆಸುವ ಸಂಬಂಧ ಕಾನೂನು ತಜ್ಞರ ಜತೆ ಸಭೆ ನಡೆಸುತ್ತೇನೆ. ಒಬಿಸಿ ಮೀಸಲಾತಿ ವಿಚಾರವಾಗಿ ಸುಪ್ರೀಂ ತೀರ್ಪು ನೀಡಿದೆ. ವಿಪಕ್ಷ ನಾಯಕರು ಕೂಡ ಪತ್ರ ಬರೆದಿದ್ದಾರೆ. ಇದುವರೆಗೆ ಸಂವಿಧಾನದಡಿ ಮೀಸಲಾತಿ ನೀಡುತ್ತಿದ್ದವು. ಮುಂದೆಯೂ ಮೀಸಲಾತಿ ನೀಡಿ ಚುನಾವಣೆ ನಡೆಸುತ್ತೇವೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದುವರೆಯುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - –-- .