ವಿಕ್ರಮ್ ರವಿಚಂದ್ರನ್ ‘ತ್ರಿವಿಕ್ರಮ’ ರಿಲೀಸ್ ಡೇಟ್ ಅನೌನ್ಸ್ ಬೆಂಗಳೂರು. ಮೇ 10, 2022 (..):ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಕೂಡ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆಗಳಿದ್ದು, ರವಿಚಂದ್ರನ್ ಪುತ್ರ ವಿಕ್ರಮ್​ರ ಮೊದಲ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳು ಗರಿಗೆದರಿವೆ. ಅಂದಹಾಗೆ ಜೂನ್ 24ರಂದು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ಘೋಷಿಸಿದೆ. ‘ತ್ರಿವಿಕ್ರಮ’ ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ನೀಡಿದ್ದು, ಸಂತೋಷ್ ರೈ ಛಾಯಾಗ್ರಹಣ ಮಾಡಿದ್ದಾರೆ. ಈಗಾಗಲೇ ಚಿತ್ರದ ಆಡಿಯೋ ಹಕ್ಕುಗಳು ದೊಡ್ಡ ಮೊತ್ತಕ್ಕೆ ಸೇಲ್ ಆಗಿ, ‘ತ್ರಿವಿಕ್ರಮ’ನ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.