ಇನ್ನು ಮೂರು ದಿನಗಳಲ್ಲಿ ಸಂಪುಟ ಪುನರಚನೆ- ಮಾಜಿ ಸಿಎಂ ಬಿಎಸ್ ವೈ. ಬೆಂಗಳೂರು,ಮೇ,7,2022(..):ಇನ್ನು ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ಪುನರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗದ್ದೇವೆ. ಕೇಂದ್ರ ನಾಯಕರ ತೀರ್ಮಾನವೇ ಅಂತಿಮ. ಇನ್ನು 3 ದಿನಗಳಲ್ಲಿ ಸಂಪುಟ ಪುನರಚನೆಯಾಗಲಿದೆ ಎಂದರು. 150 ಸ್ಥಾನ ಗೆಲ್ಲುವುದು ನಮ್ಮ ಗುರಿ. ಪ್ರಧಾನಿ ಮೋದಿಗೆ 150 ಸ್ಥಾನ ಗೆಲ್ಲುವ ಭರವಸೆ ನೀಡಿದ್ದೇವೆ. ಹಲವು ನಾಯಕರು ಬಿಜೆಪಿ ಸೇರಲಿದ್ದಾರೆ. ಮಂಡ್ಯದಿಂದ ಆನೇಕ ಮಂದಿ ಬಿಜೆಪಿ ಸೇರಲಿದ್ದಾರೆ. ನಮ್ಮ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ. 150 ಸ್ಥಾನ ಗೆಲ್ಲಲು ಪ್ರವಾಸ ಮಾಡುತ್ತೇವೆ ಎಂದು ಬಿಎಸ್ ವೈ ತಿಳಿಸಿದರು. : -- - -