ವಿದ್ಯುತ್ ಹರಿದು ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು. ಕೊಪ್ಪಳ,ಮೇ,6,2022(..):ವಿದ್ಯುತ್ ಹರಿದು ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನಲ್ಲಿ ನಡೆದಿದೆ. ಕನಕಗಿರಿ ತಾಲ್ಲೂಕಿನ ಹುಲಿ ಹೈದರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಶೈಲಮ್ಮ(28) ಮಕ್ಕಳಾದ ಪವನ್(2) ಸಾನ್ವಿ(3) ಮೃತಪಟ್ಟವರು. ಮನೆಯಲ್ಲಿ ಬಟ್ಟೆ ಒಣ ಹಾಕುವಾಗ ವಿದ್ಯುತ್ ತಗುಲಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –-