ನಿಮ್ಮನ್ನ ಸಿಎಂ ಮಾಡ್ತೀವಿ 2500 ಕೋಟಿ ಕೊಡಿ ಎಂದು ದೆಹಲಿಯಿಂದ ಬಂದು ಕೇಳಿದ್ರು- ಹೊಸ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ಬೆಳಗಾವಿ,ಮೇ,6,2022(..):ದೆಹಲಿಯಿಂದ ಬಂದ ಕೆಲವರು ಎರಡೂವರೆ ಸಾವಿರ ಕೋಟಿ ನೀಡಿ ಸಿಎಂ ಮಾಡ್ತೀವಿ ಅಂದಿದ್ರು. ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ. ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿ ಕರೆದುಕೊಂಡು ಹೋಗ್ತೀವಿ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ‌.ಪಿ.ನಡ್ಡಾರನ್ನ ಭೇಟಿ ಮಾಡಿಸ್ತೀವಿ ಅಂತಾರೆ ಎಂದು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೊಸಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಯಿಂದ ಒಂದಿಷ್ಟು ಜನ ನನ್ನ ಬಳಿಯೂ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ಸಜ್ಜ ಮಾಡಿ ಇಡ್ರಿ ಅಂದ್ರು. ಆಗ ನಾನು 2500 ಕೋಟಿ ಅಂದ್ರೆ ಏನ್ ಅಂತಾ ತಿಳಿದಿರಿ ಅಂದೆ. ಆ ಎರಡೂವರೆ ಸಾವಿರ ಕೋಟಿ ಹೆಂಗ್ ಇಡೋದು. ಏನು ಕೋಣೆಯಲ್ಲಿ ಇಡೋದೋ? ಗೋದಾಮಿನಲ್ಲಿ ಇಡೋದೋ? ಹಂಗ ಟಿಕೆಟ್ ಕೊಡ್ತೀನಿ ಅಂತಾ ರಾಜಕಾರಣದಲ್ಲಿ ಎಲ್ಲಾ ಕಡೆ ಮೋಸ ಮಾಡ್ತಾರೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ನಾನು ವಾಜಪೇಯಿಯವರ ಕೈಯಲ್ಲಿ ಕೆಲಸ ಮಾಡಿದವನು. ಎಲ್.ಕೆ ಅಡ್ವಾಣಿ, ರಾಜನಾಥ್ ಸಿಂಗ್‌, ಅರುಣ್ ಜೇಟ್ಲಿ ನನ್ನ ಬಸನಗೌಡ ಅಂತಾ ಹೆಸರು ಹೇಳಿ ಕರಿತಿದ್ರು. ಅಂತಾ ವ್ಯಕ್ತಿಗೆ ಹೇಳ್ತಾರೆ ಎರಡೂಸಾವಿರ ಕೋಟಿ ಸಜ್ಜ ಮಾಡಿ ಸಿಎಂ ಮಾಡ್ತೀವಿ ಅಂತಾರೆ. ನಡ್ಡಾರ ಮನೆಗೆ ಕರೆದುಕೊಂಡು ಹೋಗ್ತೀವಿ, ಅಮಿತ್ ಶಾ ಮನೆಗೆ ಕರೆದುಕೊಂಡು ಹೋಗ್ತೀವಿ ಅಂತಾ ಹಿಂಗಿಲ್ಲಾ ಹೇಳಿ ಮಾಸ ಮಾಡ್ತಾರೆ. ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ ಎಂದು ಯತ್ನಾಳ್ ಹೇಳಿದರು. : – – – 2500 - -- … .2500 : , 6, 2022 (..): “ . 2,500 . ’ . , , , .. , ., .,” . , , “ . .2,500 , . , . 2,500 ? ? ? ? , .,” .“ .. . , . .2,500 . ,” .: / / .2,500 /