ಸಚಿವ ಅಶ್ವಥ್ ನಾರಾಯಣ್ ಬೆಂಬಲಕ್ಕೆ ನಿಂತ ಸಿಎಂ ಬೊಮ್ಮಾಯಿ: ಕಾಂಗ್ರೆಸ್ ಆರೋಪಕ್ಕೆ ತಿರುಗೇಟು. ಬೆಂಗಳೂರ,ಮೇ,5,2022(..):ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪಗಳೆಲ್ಲವೂ ಆಧಾರ ರಹಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದು ಈ ಮೂಲಕ ಸಚಿವ ಅಶ್ವಥ್ ನಾರಾಯಣ್ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಶ್ವಥ್ ನಾರಾಯಣ್ ವಿರುದ್ಧದ ಆರೋಪಗಳೆಲ್ಲವೂ ಆಧಾರ ರಹಿತ. ಯಾವುದೇ ಆಧಾರವಿಲ್ಲದೇ ಕಾಂಗ್ರೆಸ್ ಆರೋಪಿಸುತ್ತಿದೆ. ಅಶ್ವತ್ ನಾರಾಯಣ್ ವಿರುದ್ದ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಇದ್ದಾಗಲೂ ಅಕ್ರಮ ನಡೆದಿತ್ತು . ಆಗ ಕಾಂಗ್ರೆಸ್ ನವರು ಕ್ರಮ ಕೈಗೊಂಡಿರಲಿಲ್ಲ. ಈಗ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿರುಗೇಟು ನೀಡಿದರು. ಪಿಎಸ್ ಐ ಹಗರಣ ಕುರಿತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಜವಾಬ್ದಾರಿಯುತ ಪಕ್ಷ. ಡಾ. ಅಶ್ವತ್ ನಾರಾಯಣ್ ವಿರುದ್ದ ಆರೋಪಕ್ಕೆ ಸಣ್ಣ ಸಾಕ್ಷ್ಯವೂ ನೀಡಿಲ್ಲ. ಪ್ರಕರಣ ಕುರಿತು ಸರ್ಕಾರದಿಂದ ನಿಷ್ಪಕ್ಷಪಾತ, ಪ್ರಾಮಾಣಿಕವಾಗಿ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ನವರಿಗೆ ಬಣ್ಣ ಬಯಲಾಗುತ್ತೆ ಎಂಬ ಭಯವಿದೆ ಎಂದು ಟಾಂಗ್ ನೀಡಿದರು. : -– - … : , 5, 2022 (..): . , , “ . . . . . , .”“ . . . . ,” .: / / / /