ಕಾವೇರಿ ನೀರು ವಿವಾದ: ಜು.14 ರಂದು ಸರ್ವಪಕ್ಷ ಸಭೆಗೆ ನಿರ್ಧಾರ- ಸಿಎಂ ಸಿದ್ದರಾಮಯ್ಯ ಬೆಂಗಳೂರು,ಜುಲೈ,12,2024 (..):ಕಾವೇರಿ ನದಿ ನೀರು ವಿವಾದ ಸಂಬಂಧ ಜುಲೈ 14 ರಂದು ಸರ್ವಪಕ್ಷ ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಜುಲೈ 31ರವರೆಗೆ ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ನೀರು ಬಿಡುಗಡೆಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸ್ಸು ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಸರ್ವಪಕ್ಷ ಸಭೆ ಕರೆಯುತ್ತಿದ್ದಾರೆ. ಜುಲೈ 14 ರಂದು ಭಾನುವಾರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಯಲಿದೆ. ಸರ್ವಪಕ್ಷ ಸಭೆಯಲ್ಲಿ ನಾನೂ ಕೂಡ ಭಾಗಿಯಾಗುತ್ತೇನೆ ಎಂದರು. ಪ್ರತಿನಿತ್ಯ 1 ಟಿಎಂಸಿ ಬಿಡುಗಡೆಗೆ ಶಿಫಾರಸ್ಸು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಸಂಬಂಧ ಸರ್ವಪಕ್ಷ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಸಭೆಯಲ್ಲಿ ರಾಜ್ಯದ ಕೇಂದ್ರ ಸಚಿವರು, ಸಚಿವರು ಕಾವೇರಿ ಕಣಿವೆಯ ಶಾಸಕರಿಗೆ ಆಹ್ವಾನ ನೀಡಲಾಗುತ್ತದೆ ಎಂದರು. : , -, ,