ನಟ ದರ್ಶನ್ ಹಾಗೂ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆಂಗಳೂರು,ಸೆಪ್ಟಂಬರ್,30,2024 (..):ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿಕೆ ಮಾಡಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲ ಸುನೀಲ್ ಅವರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ. ಹಾಗೆಯೇ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದ್ದು, ಒಂದು ವೇಳೆ ಸೆಷನ್ಸ್​ ಕೋರ್ಟ್​ನಲ್ಲಿ ಬೇಲ್ ಸಿಗದಿದ್ದರೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. : , ,