ಹಲಾಲ್, ಜಟ್ಕಾ ಕಟ್ ವಿವಾದದ ನಡುವೆ ಸರ್ಕಾರ ಮಹತ್ವದ ಆದೇಶ: ಪ್ರಾಣಿವಧೆಗೂ ಮುನ್ನ ಸ್ಟನ್ನಿಂಗ್ ಕಡ್ಡಾಯ. ಬೆಂಗಳೂರು,ಏಪ್ರಿಲ್,1,2022(..):ರಾಜ್ಯದಲ್ಲಿ ಹಲಾಲ್, ಜಟ್ಕಾ ಕಟ್ ವಿವಾದದ ನಡುವೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಾಣಿವಧೆಗೂ ಮುನ್ನ ಸ್ಟನ್ನಿಂಗ್ ಕಡ್ಡಾಯ ಎಂದು ತಿಳಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಪಶುಸಂಗೋಪನೆ ಇಲಾಖೆ, ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ( ಪ್ರಾಣಿವಧೆಗೂ ಮುನ್ನ ಪ್ರಜ್ಞೆ ತಪ್ಪಿಸುವ ವಿಧಾನ) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ. ಹಿಂಸೆ ನೀಡದೆ ಪ್ರಾಣಿ ವಧೆ ಮಾಡಬೇಕು ಪ್ರಾಣಿಗಳಿಗೆ ಹಿಂಸೆ ನೀಡಿದರೇ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. 50 ಸಾವಿರದಿಂದ 1 ಲಕ್ಷದವರೆಗೆ ದಂಡ ವಿಧಿಸುವುದಾಗಿ ಸರ್ಕಾರ ಹೇಳಿದೆ. : – - – - -.