ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯೋತ್ಸವ; ಗದ್ಧುಗೆ ದರ್ಶನ ಪಡೆದ ಬಿಎಸ್ ವೈ. ತುಮಕೂರು,ಏಪ್ರಿಲ್,1,2022(..):ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯುತ್ಸವ ಇಂದು ಅದ್ಧೂರಿಯಾಗಿ ನಡೆಯುತ್ತಿದ್ದು ಸಿದ್ದಗಂಗಾ ಮಠದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಈ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ‍್ಧುಗೆ ದರ್ಶನ ಪಡೆದರು. ಸಚಿವ ಪ್ರಭುಚೌಹಾಣ್ ಸಾಥ್ ನೀಡಿದರು. ಸಿದ‍್ಧಗಂಗಾ ಶ್ರೀಗಳ ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಅಮಿತ್ ಶಾ ಸಿದ್ಧಗಂಗಾ ಶ್ರೀಗಳ ಗದ್ಧುಗೆ ಪಡೆಯಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಶ್ರೀಗಳ ಗದ್ಧುಗೆ ದರ್ಶನ ಪಡೆದು ನಂತರ ವೇದಿಕೆಗೆ ಅವರು ಅಗಮಿಸಲಿದ್ದಾರೆ. : - -115th