ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು. ಮೈಸೂರು,ಮಾರ್ಚ್,30,2022(..):ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ. 35 ವರ್ಷದ ಷಡಕ್ಷರಿಸ್ವಾಮಿ ಮೃತಪಟ್ಟ ಬೈಕ್ ಸವಾರ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ತಾಲೂಕಿನ ಮೇಲೂರು ಗ್ರಾಮದ ನಿವಾಸಿಯಾಗಿರುವ ಷಡಕ್ಷರಿಸ್ವಾಮಿ ಅಲಿಯಾಸ್ ಮಂಜು, ಕೆಲಸದ ನಿಮಿತ್ತ ಪಿರಿಯಾಪಟ್ಟಣಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಈ ವೇಳೆ ಕೇರಳ ಮೂಲದ ಕಾರು ಡಿಕ್ಕಿ ಬೈಕ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕೇರಳ ಮೂಲದ 5 ವಿದ್ಯಾರ್ಥಿಗಳಿದ್ದರು. ಇನ್ನು ಅಜಾಗರೂಕತೆ ಹಾಗೂ ವೇಗವಾಗಿ ಬಂದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾರು ಚಾಲಕ ಹಾಗೂ ಆತನ ಸ್ನೇಹಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. : ---