ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ. ಚಿಕ್ಕೋಡಿ,ಮಾರ್ಚ್,28,2022(..):ಎಸ್ ಎಸ್ ಎಲ್ ಸಿ ಪರೀಕ್ಷೆ .ಆರಂಭವಾದ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್ ಡಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ರಾಹುಲ್, ಭೀಮಶಿ ಹುಲಕುಂದ, ಕಾರ್ತಿಕ್ ಲಚ್ಚಪ್ಪ ಕುಂಬಾರ್, ಸಿದ್ಧು ಮಾದೇವ್ ಜೋಗಿ, ಮಾಂತೇಶ್ ಸಂಗಪ್ಪ ಡೊಳ್ಳಿನವರ ಹಾಗೂ ಸವೀತಾ ಮಾದೇವ ಹೊಸೂರು ಬಂಧಿತ ವಿದ್ಯಾರ್ಥಿಗಳು. ಐವರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಅಸಲಿ ಅಭ್ಯರ್ಥಿಗಳ ಬದಲಾಗಿ ಪರೀಕ್ಷೆಗೆ ಹಾಜರಾಗಿದ್ದರು. ನಕಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪರಿಶೀಲನೆ ವೇಳೆ ಸಿಕ್ಕಿ ಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. : 6 - - –