ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು. ಮೈಸೂರು,ಮಾರ್ಚ್,28,2022(..):ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ. ಟಿ.ನರಸೀಪುರ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಅಕ್ಕೂರು ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಈ ನಡುವೆ ಇಂದು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿ ಅನುಶ್ರೀ ಕುಸಿದು ಬಿದ್ದಿದ್ದು ತಕ್ಷಣ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿದ್ಯಾರ್ಥಿನಿ ಅನುಶ್ರೀ ಮೃತಪಟ್ಟಿದ್ದಾರೆಂದು ಮಾಹಿತಿ ತಿಳಿದು ಬಂದಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. : -- - … , 28, 2022 (..): . . , . , . . . 10th . . . . .: / / /