ಜೂನ್ 16,17,18 ರಂದು ಸಿಇಟಿ ಪರೀಕ್ಷೆ. ಬೆಂಗಳೂರು,ಮಾರ್ಚ್,28,2022(..):ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ() ಜೂನ್ 16, 17 ಮತ್ತು 18ರಂದು ನಡೆಯಲಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ್, ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, ಜೂನ್ 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ ಜೂನ್ 18 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ ಲೈನ್ ಮೂಲಕವೇ ನಿಗದಿತ ಶುಲ್ಕ ಪಾವತಿಸಲು ಏ.22ರವರೆಗೆ ಕೊನೆಯದಿನವಾಗಿದೆ. ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲಿನ ಮಾಹಿತಿ ಪರಿಷ್ಕರಿಸಲು ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ಧಾರೆ. : - - 16,17,18 … 16 & 17, 18 : -2022, , 16, 17, 18 , ... , , . , . () () 16, () () 17. 18-06-2022 . -2022 5 20 . 22. , 2- 6. , 30, .