ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹುಚ್ಚುನಾಯಿಯಂತೆ ಕೂಗುತ್ತಿದ್ದಾರೆ: ಕೆ.ಎಸ್.ಈಶ್ವರಪ್ಪ ‘ಲೂಸ್ ಟಾಕ್’ ! ಶಿವಮೊಗ್ಗ, ಮಾರ್ಚ್ 26, 2022 (..):ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಾಕ್ಸಮರ ತಾರಕಕ್ಕೇರುತ್ತಿದೆ. ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹುಚ್ಚುನಾಯಿಯಂತೆ ಕೂಗುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಿ ಹೋಗುತ್ತಾರೆ. ಸಿದ್ದರಾಮಯ್ಯ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಸ್ವಾಮೀಜಿಗಳು ತಲೆ ಮೆಲೆ ಖಾವಿ ಬಟ್ಟೆ ಹಾಕ್ತಾರೆ ಅದನ್ನು ಪ್ರಶ್ನಿಸುತ್ತೀರಾ ಎಂದು ಕೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿಲ್ಲ. ಧೈರ್ಯ ಇದ್ದರೆ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸಲಿ ಎಂದು ಸವಾಲು ಹಾಕಿದ್ದಾರೆ.