ಯೋಗಿ ಆದಿತ್ಯನಾಥ್​ ಸೆಕೆಂಡ್ ಇನ್ನಿಂಗ್ಸ್ ಶುರು: ಮೊದಲ ನಿರ್ಧಾರ ಘೋಷಣೆ ಬೆಂಗಳೂರು, ಮಾರ್ಚ್ 26, 2022 (..):ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಮೊದಲ ನಿರ್ಧಾರ ಘೋಷಣೆ ಮಾಡಿರುವ ಯೋಗಿ ಆದಿತ್ಯನಾಥ್​ ಉಚಿತ ಪಡಿತರ ಯೋಜನೆಯನ್ನು ಮತ್ತೆ 3 ತಿಂಗಳವರೆಗೆ ವಿಸ್ತರಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆಯನ್ನು 2022ರ ಮಾರ್ಚ್ 31ರಿಂದ​ ಜೂನ್​ 30ರವರೆಗೆ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.