ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಸೇರಿ ಕೇಂದ್ರ ಸಚಿವರು ಭಾಗಿ. ಲಕ್ನೊ,ಮಾರ್ಚ್,25,2022(..):ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಸತತ 2ನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾ ಗಿ ಯೋಗಿ ಆದಿತ್ಯನಾಥ ಪ್ರಮಾಣವಚನ ಸ್ವೀಕರಿಸಿದ್ದಾರೆ. ಯೋಗಿ ಆದಿತ್ಯನಾಥ ಅವರು ಅವರು ಸತತ 2ನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಜತೆ ಡಿಸಿಎಂ ಆಗಿ ಬ್ರಜೇಶ್ ಪಠಾಕ್, ಮತ್ತು ಕೆಪಿ ಮೌರ್ಯ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಪಾಲ್ಗೊಂಡಿದ್ದರು. ಇನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳು ಕೂಡ ಭಾಗಿಯಾಗಿದ್ದರು. ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಹ ಉಪಸ್ಥಿತರಿದ್ದರು. : -- -