ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ. ಹಾವೇರಿ,ಮಾರ್ಚ್,21,2022(..):ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಇಳಿಕೆ ಮಾಡುವ ಬಗ್ಗೆ ಚಿಂತನೆ ನಡೆಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದು ಈ ಮೂಲಕ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಇಂದು ಹಾವೇರಿಯ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಮೃತ ನವೀನ್ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದರು. ಶುಲ್ಕ ಇಳಿಕೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ದುಬಾರಿಯಾಗುತ್ತಿದೆ. ಮೆಡಿಕಲ್ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಚಿಂತನೆ ಮಾಡಲಾಗುತ್ತದೆ . ಎಬಿಸಿ ಕ್ಯಾಟಗರಿ ಮಾಡಿ ಶುಲ್ಕ ಇಳಿಕೆಗೆ ತೀರ್ಮಾನಿಸುತ್ತೇವೆ ಎಂದರು. ನಮ್ಮಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ‌ ಕಡಿಮೆ ಇದೆ. ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು. ಶೇ.95 ರಷ್ಟು ಅಂಕ ಪಡೆದವರಿಗೂ ಸೀಟ್ ಸಿಗುತ್ತಿಲ್ಲ. ಈ ಬಗ್ಗೆ ಗಂಭೀರ ಚಿಂತನೆ ಆಗಬೇಕು ಎಂದರು. : -- – – … , 21, 2022 (..): . , . . , , , .“ , . . 95 . ,” .: / /