ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಇಬ್ಬರು ಸಾವು ಹುಬ್ಬಳ್ಳಿ,ಮಾರ್ಚ್,18,2022(..): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಗಬ್ಬೂರ ಬೈಪಾಸ್ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ರಂಜಿತ್, ರಾಕೇಶ್ ಮೃತಪಟ್ಟವರು. ಮಸ್ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಳ್ಳಾಪುರದಿಂಧ ದಾಂಡೇಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : --