ಮೈಸೂರು ವಿಮಾನ ನಿಲ್ದಾಣಕ್ಕೆ ಸಂಸದ ಯದುವೀರ್ ಭೇಟಿ ಮೈಸೂರು,ಜುಲೈ,10,2024 (..):ಮೈಸೂರು ವಿಮಾನ ನಿಲ್ದಾಣಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂಸದ ಯದುವೀರ್, ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ ವಿಸ್ತರಣೆಯ ಕುರಿತು ಚರ್ಚಿಸಿದರು. ವಿಮಾನ ನಿಲ್ದಾಣದ ನಿರ್ದೇಶಕ ಶ್ರೀ ಅನೂಪ್ ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಬಗ್ಗೆಯೂ ಚರ್ಚಿಸಲಾಯಿತು. ಈ ವೇಳೆ ವಿಮಾನ ನಿಲ್ದಾಣ ಅಧಿಕಾರಿಗಳು ಭಾಗಿಯಾಗಿದ್ದರು. : , , ,