ಡಿಕೆಶಿ-ಸಿದ್ದು ಒಟ್ಟಿಗೆ ಸೇರಿ ಕೈ ಸಿಎಂ ಅಭ್ಯರ್ಥಿ ಘೋಷಿಸಲು ಸಾಧ್ಯವೇ? ಟ್ವಟ್ಟರ್’ನಲ್ಲಿ ಬಿಜೆಪಿ ಸವಾಲು ಬೆಂಗಳೂರು, ಮಾರ್ಚ್ 13, 2022 (..):ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ಸಾಧ್ಯವೇ ಎಂದು ಕಾಂಗ್ರೆಸ್‍ಗೆ ಬಿಜೆಪಿ ಸವಾಲು ಹಾಕಿದೆ. ಕಾಂಗ್ರೆಸ್ ಮುಕ್ತ ಭಾರತ್ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ವ್ಯಂಗ್ಯವಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒಟ್ಟಿಗೆ ಸೇರಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ಸಾಧ್ಯವೇ ಎಂದು ಕಾಂಗ್ರೆಸ್‍ಗೆ ಬಿಜೆಪಿ ಸವಾಲು ಹಾಕಿದೆ. ನಾವು ಈಗಲೇ ಚುನಾವಣೆಗೆ ಸಿದ್ಧವೆಂದು ಸಿದ್ದರಾಮಯ್ಯ ಹೇಳುತ್ತಾರೆ, ಗಾಂ ಕುಟುಂಬವಿಲ್ಲದೆ ಕಾಂಗ್ರೆಸ್ ಒಟ್ಟಾಗಿರಲು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಹಾಗಿದ್ದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ ನೋಡೋಣ? ಎಂದು ಬಿಜೆಪಿ ಸವಾಲು ಹಾಕಿದೆ.