ಸಂಪುಟ ಸೇರುವ ಬಗ್ಗೆ ನನ್ನ ನಿಲುವು ಸ್ಪಷ್ಟ: ಅವಧಿಗೂ ಮುನ್ನ ಚುನಾವಣೆ ಇಲ್ಲ- ಮಾಜಿ ಸಿಎಂ ಜಗದೀಶ್ ಶೆಟ್ಟರ್. ಹುಬ್ಬಳ್ಳಿ,ಮಾರ್ಚ್,12,2022(..):ರಾಜ್ಯ ಸಂಪುಟ ಸೇರುವ ಬಗ್ಗೆ ನನ್ನ ನಿಲುವು ಸ್ಪಷ್ಟವಾಗಿದೆ. ನಾನು ಮತ್ತೆ ಸಚಿವ ಸಂಪುಟ ಸೇರಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ. ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು. ಸಂಪುಟ ಸೇರುವ ಬಗ್ಗೆ ನನ್ನ ನಿಲುವು ಸ್ಪಷ್ಟವಾಗಿದೆ ಎಂದರು. ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ನಡೆಯಲ್ಲ. ರಾಜಕೀಯ ಅನುಭವದ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಇಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು. ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿಲ್ಲ, ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ನೀರು ಕೊಡಲ್ಲ ಅಂತಾರೆ ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡ್ತಾರೆ ಎಂದು ಜಗದೀಶ್ ಶೆಟ್ಟರ್ ಟೀಕಿಸಿದರು. : - – - .