ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಬಂಧನ ಬೆಂಗಳೂರು, ಜುಲೈ 10,2024 (..):ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತಸಹಾಯಕ ಹರೀಶ್‌ ಎಂಬುವವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧ ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು. ಬಂಧಿತ ಹರೀಶ್​ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು, ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. : , . , ,