ರಾಜ್ಯದಲ್ಲಿ 135 ಸ್ಥಾನ ಗೆದ್ಧು ಮತ್ತೆ ಅಧಿಕಾರಕ್ಕೆ ಬರುತ್ತೇವೆ-ಕಾಂಗ್ರೆಸ್ ಗೆ ಮಾಜಿ ಸಿಎಂ ಬಿಎಸ್ ವೈ ಟಾಂಗ್. ಬೆಂಗಳೂರು,ಮಾರ್ಚ್,11,2022(..):ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ವಿಶ್ವಾಸ ಹೆಚ್ಚಿಸಿದೆ. ರಾಜ್ಯದಲ್ಲಿ 135 ಸ್ಥಾನಗಳನ್ನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. ವಿಧಾನಸಭೆಯಲ್ಲಿ ಇಂದು ಮಾತನಾಡಿ ಕಾಂಗ್ರೆಸ್ ಗೆ ಟಾಂಗ್ ನೀಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 5 ರಾಜ್ಯಗಳ ಗೆಲುವು ವಿಶ್ವಾಸ ಹೆಚ್ಚಿಸಿದೆ. ಸಾಮೂಹಿಕ ನಾಯಕತ್ವದಡಿ ರಾಜ್ಯ ಪ್ರವಾಸ ಮಾಡುತ್ತೇವೆ. 135 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದರು. ದೇಶದ ಜನ ಮೋದಿ ಬಿಜೆಪಿ ಪರವಾಗಿದ್ದಾರೆ. ಇದು ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಕಾಂಗ್ರೆಸ್ ಮುಕ್ತ ದೇಶ ಮಾಡುತ್ತೇವೆ. ಅಧಿವೇಶನ ಮುಗಿದ ಬಳಿಕ ರಾಜ್ಯ ಪ್ರವಾಸ ಮಾಡಿ ಕೇಂದ್ರ ರಾಜ್ಯದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದು ಬಿಎಸ್ ವೈ ನುಡಿದರು. : – – -