ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಬಲಿ. ಹಾಸನ ಮಾರ್ಚ್,11,2022(..): ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ. ಬೇಲೂರು ತಾಲ್ಲೂಕು ಕಡೆಗರ್ಜೆ ಬಳಿ ಈ ಘಟನೆ ನಡೆದಿದೆ. ಚಿಕ್ಕಯ್ಯ(65) ಚಿಕ್ಕಯ್ಯ(68) ಕಾಡಾನೆದಾಳಿಗೆ ಬಲಿಯಾದವರು. ಕಾಡಾನೆ ದಾಳಿ ನಿಯಂತ್ರಿಸದ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ಬೆಂಕಿ ಹಾಕಿ ರಸ್ತೆ ತಡೆ ಮಾಡಿದ್ದಾರೆ. ಸ್ಥಳಕ್ಕೆ ಶಾಸಕರು, ಡಿಎಫ್‌ಓ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತು ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : ---