ಪಂಜಾಬ್ ನಲ್ಲಿ ಆಡಳಿತ ರೂಢ ಕಾಂಗ್ರೆಸ್ ಗೆ ಮುಖಭಂಗ: ಎಎಪಿ ಅಧಿಕಾರ ಹಿಡಿಯುವುದು ಫಿಕ್ಸ್. ಚಂಡಿಗಢ,ಮಾರ್ಚ್,10,2022(..):ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ಪಂಜಾಬ್ ನಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಹೌದು ಪಂಜಾಬ್ ನಲ್ಲಿ ಆಡಳಿತ ರೂಢ ಕಾಂಗ್ರೆಸ್ ತೀವ್ರ ಹಿನ್ನೆಡೆ ಅನುಭವಿಸಿದ್ದು ಇಲ್ಲಿ ಎಎಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಮೂಲಕ ಅಮ್ ಆದ್ಮಿ ಪಕ್ಷ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಪಂಜಾಬ್ ನ 117 ಸ್ಥಾನಗಳ ಪೈಕಿ, ಕಾಂಗ್ರೆಸ್ 13, ಎಎಪಿ 88, ಎಸ್ ಎಡಿ 8 ಬಿಜೆಪಿ 5 ಇತರೆ 3 ಸ್ಥಾಗಳಲ್ಲಿ ಮುನ್ನಡೆ ಸಾಧಿಸಿವೆ. ಇಲ್ಲಿ ಮ್ಯಾಜಿಕ್ ನಂಬರ್ 59 ಆಗಿದೆ. ಕಾಂಗ್ರೆಸ್ ಆಂತರಿಕ ಕಲಹದಿಂದಲೇ ಪಜಾಬ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಿದೆ ಎನ್ನಲಾಗಿದೆ. : ---