ಗೋವಾದಲ್ಲಿ ಹಾವು ಏಣಿ ಆಟ: ಮ್ಯಾಜಿಕ್ ನಂಬರ್ ನತ್ತ ಬಿಜೆಪಿ ನವದೆಹಲಿ,ಮಾರ್ಚ್,10,2022(..):ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಗೋವಾದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ಉಂಟಾಗಿದೆ. ಈ ನಡುವೆ ಗೋವಾದಲ್ಲಿ ಅಧಿಕಾರ ಹಿಡಿಯಲು 40 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಸ್ಥಾನ ಗಳಿಸಬೇಕು. ಇದೀಗ ಬಂದ ಮಾಹಿತಿ ಪ್ರಕಾರ ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ನತ್ತ ಸಾಗುತ್ತಿದೆ. ಕಾಂಗ್ರೆಸ್​ 13 ಸ್ಥಾನಗಳೊಂದಿಗೆ ಬಿಜೆಪಿಗೆ ಫೈಟ್​ ನೀಡುತ್ತಿದೆ. 1 ಎಎಪಿ 5 ಇತರೆ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಹಿನ್ನೆಡೆ ಅನುಭವಿಸಿದ್ದಾರೆ. ಗೋವಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಕಾರ್ಯನಿರ್ವಹಿಸಿದ್ದರು. : –- –