ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ. ಉತ್ತರಪ್ರದೇಶ,ಮಾರ್ಚ್,10,2022(..):ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು ಈ ನಡುವೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿದೆ. 403ಕ್ಷೇತ್ರಗಳ ಪೈಕಿ ಬಿಜೆಪಿ-229 ,ಎಸ್ಪಿ 103, ಬಿಎಸ್ ಪಿ 9, ಕಾಂಗ್ರಸ್ 4 ಇತರೇ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಡಳಿತರೂಡ ಬಿಜೆಪಿ ಬಹುಮತದತ್ತ ಸಾಗುತ್ತಿದ್ದು ಉತ್ತರ ಪ್ರದೇಶದಲ್ಲಿ ಸತತ 2ನೇ ಬಾರಿ ಅಧಿಕಾರ ಹಿಡಿಯುವ ಲಕ್ಷಣಗಳು ಗೋಚರಿಸುತ್ತಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ 5 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು ಪಂಜಾಬ್ ನಲ್ಲಿ ಎಎಪಿ, ಉತ್ತರಖಂಡ್ , ಗೋವಾದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. - - –-