ಏಪ್ರಿಲ್ 8 ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ. ಬೆಂಗಳೂರು,ಮಾರ್ಚ್,9,2022(..):ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಬ್ರೇಕ್ ಬಿದ್ದಿದ್ದ ಐತಿಹಾಸಿಕ ಬೆಂಗಳೂರು ಕರಗ ಉತ್ಸವವನ್ನ ಈ ಬಾರಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಮಾಹಿತಿ ನೀಢಿರುವ ಧರ್ಮರಾಯನ ಸ್ವಾಮಿ ದೇವಸ್ಥಾನ ಮಂಡಳಿ, ಈ ಬಾರಿ ಏಪ್ರಿಲ್ 8 ರಿಂದ ಬೆಂಗಳೂರು ಕರಗ ಉತ್ಸವ ಆರಂಭವಾಗಲಿದ್ದು ಏಪ್ರಿಲ್ 18ರವರೆಗೆ ನಡೆಯಲಿದೆ. ಕೊರೋನಾದಿಂದಾಗಿ ಕಳೆದ ಎರಡು ವರ್ಷ ಕರಗ ಉತ್ಸವ ನಡೆದಿರಲಿಲ್ಲ. ಆದರೆ ಈ ಬಾರಿ ಅದ‍್ಧೂರಿಯಾಗಿ ಕರಗ ಉತ್ಸವ ನಡೆಸಲು ತೀರ್ಮಾನಿಸಿದ್ದೇವೆ ಎಂದಿದೆ. ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಬೆಂಗಳೂರು ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಅನುಮತಿ ಕೊಡಲಾಗಿತ್ತು. ಸದ್ಯ ಕೊರೊನಾ ಕಡಿಮೆಯಾಗಿದ್ದು ಈ ಹಿನ್ನೆಲೆ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್ ಕೊಟ್ಟಿದೆ. : - – - 8