ಗೋವಾದಲ್ಲಿ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್​ ಹೆಗಲಿಗೆ.. ಬೆಂಗಳೂರು,ಮಾರ್ಚ್,8,2022(..):ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು ಮಾರ್ಚ್ 10 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಗೋವಾಗೆ ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕಳೆದ ಬಾರಿಯಂತೆ ಈ ಬಾರಿ ಶಾಸಕರು ಕೈತಪ್ಪದಂತೆ ಎಚ್ಚರಿಕೆ ವಹಿಸಲು ಎಐಸಿಸಿ ಮುಂದಾಗಿದ್ದು, ಹೀಗಾಗಿ ಎಐಸಿಸಿ ಸೂಚನೆ ಮೇರೆಗೆ ಡಿ.ಕೆ. ಶಿವಕುಮಾರ್ ಗೋವಾಗೆ ತೆರಳಲಿದ್ದಾರೆ ಎನ್ನಲಾಗಿದೆ. ಗೋವಾದಲ್ಲಿ ನೂತನ ಶಾಸಕರ ರಕ್ಷಣೆ ಜವಾಬ್ದಾರಿ ಡಿ.ಕೆ. ಶಿವಕುಮಾರ್ ​ಗೆ ವಹಿಸಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಸ್ಥಳಕ್ಕೆ ಇರಿಸುವಂತೆ ನೋಡಿಕೊಳ್ಳಲಾಗಿದೆ. ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಗುರುತು ಮಾಡಿ ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗೋವಾದಲ್ಲಿ ಮೂರು ದಿನಗಳ ಕಾಲ ಉಳಿಯಲಿರುವ ಡಿ.ಕೆ ಶಿವಕುಮಾರ್ ಸರ್ಕಾರ ರಚನೆ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ ಎನ್ನಲಾಗಿದೆ. : -- - … . .. , 8, 2022 (..): , 10. , .. , . . .. ... . . , .: / .. / / /