ಹಿಜಾಬ್ ತಂಟೆಗೆ ಬಂದ್ರೆ ತುಂಡು ತುಂಡು ಮಾಡುವುದಾಗಿ ಹೇಳಿದ್ಧ ‘ಕೈ’ ಮುಖಂಡ ಅರೆಸ್ಟ್. ಕಲಬುರಗಿ,ಮಾರ್ಚ್,8,2022(..):ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್​ ಮುಖಂಡ ಮುಕ್ರಂ ಖಾನ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಕ್ರಂಖಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್​ ಮುಖಂಡ ಆಗಿದ್ದು, ಹಿಜಾಬ್ ವಿವಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದ ವೇಳೆ ಮುಕ್ರಂ ಖಾನ್ ವಿವಾದಾತ್ಮಕ ಮತ್ತು ಬೆದರಿಕೆಯ ಹೇಳಿಕೆ ನೀಡಿದ್ದರು. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್​ರನ್ನು ಪೊಲೀಸರು ಹೈದರಾಬಾದ್​ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : ---