ಪ್ರಸ್ತಾವನೆ ತಿರಸ್ಕಾರ: ಕನಕಪುರ, ರಾಮನಗರಕ್ಕಿಲ್ಲ ವೈದ್ಯಕೀಯ ಕಾಲೇಜು ನವದೆಹಲಿ, ಜುಲೈ 9,2024 (..):ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕಾರ ಮಾಡಿದೆ. ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಆದರೆ, ಪ್ರಸ್ತಾವಿತ ಐದು ಕಾಲೇಜುಗಳ ಪೈಕಿ ಮೂರಕ್ಕೆ ಒಪ್ಪಿಗೆ ನೀಡಿದೆ. ಬೆಂಗಳೂರು ಉತ್ತರದ ವ್ಯಾಪ್ತಿಯ ಬಿಜಿಎಸ್​​ ವೈದ್ಯಕೀಯ ಕಾಲೇಜು, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ & ರಿಸರ್ಚ್ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. : , , , ,