ಎಂಎಲ್ ಸಿ ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ ಬೆಂಗಳೂರು,ಜುಲೈ,9, 2024 (..):ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನ ನ್ಯಾಯಾಲಯ ವಜಾಗೊಳಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣ ಸಂಬಂಧ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಸೂರಜ್ ರೇವಣ್ಣ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. : , , ,