ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ- ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರು,ಜುಲೈ,10,2024 (..):ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಪರಮೇಶ್ವರ್, ಪ್ರಕರಣದಲ್ಲಿ ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ಇಡಿ ಅಧೀಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಇಡಿ ಅಧಿಕಾರಿಗಳು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದರು. ಬೆಂಗಳೂರು, ಬಳ್ಳಾರಿ, ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರ. ಬಸನಗೌಡ ದದ್ದಲ್ ನಿವಾಸದ ಮೇಲೆ ಶಾಸಕರ ಭವನದ ಮೇಲೆ ಇಡಿ ದಾಳಿಯಾಗಿದೆ. : , , , , , ..