ಇನ್ನೆರೆಡು ದಿನಗಳಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಏರ್ ಲಿಫ್ಟ್- ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ. ನವದೆಹಲಿ,ಮಾರ್ಚ್,5,2022(..):ಇನ್ನೆರೆಡು ದಿನಗಳಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡುತ್ತೇವೆ ಎಂದು ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ, ಉಕ್ರೇನ್ ನಲ್ಲಿ 19 700 ಭಾರತೀಯ ವಿದ್ಯಾರ್ಥಿಗಳು ಇದ್ದರು. ಈ ಪೈಕಿ ಯುದ್ದ ಆರಂಭಕ್ಕೂ ಮುನ್ನ 4000 ವಿದ್ಯಾರ್ಥಿಗಳು ವಾಪಸ್ ಆಗಿದ್ದರು. ಬಳಿಕ 15 ಸಾವಿರ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದರು. ಸದ್ಯ ರೊಮೇನಿಯಾ ಮೂಲಕ 6000 ಸಾವಿರ ವಿದ್ಯಾರ್ಥಿಗಳನ್ನ ವಾಪಸ್ ಕರೆ ತರಲಾಗಿದೆ ಎಂದು ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. : – – - -