ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಬಸ್ ಪಾಸ್ ಬೆಂಗಳೂರು,ಮಾರ್ಚ್,4,2022(..):ಕಟ್ಟಡ ಕಾರ್ಮಿಕರಿಗೆ ರಾಜ್ಯ ಬಜೆಟ್ ನಲ್ಲಿ ಸಿಹಿಸುದ್ದಿ ನೀಡಲಾಗಿದ್ದು, ರಿಯಾಯಿತಿ ದರದಲ್ಲಿ ಬಸ್​ ಪಾಸ್​ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ. ಇದರ ಜತೆಗೆ ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿ ಮತ್ತು ದಾವಣಗೆರೆ ಇಎಸ್​ಐ ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. : – –-