ಕಾಂಗ್ರೆಸ್ ಪಾದಯಾತ್ರೆಗೆ ಶಾಕ್: ಬೆಂಗಳೂರಿನಲ್ಲಿ ಪ್ರತಿಭಟನೆ ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ. ಬೆಂಗಳೂರು,ಮಾರ್ಚ್,3,2022(..):ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಗೆ ಬಿಗ್ ಶಾಕ್. ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ ಮೆರವಣಿಗೆಗೆ ಅವಕಾಶ ನೀಡದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ಹೊರಡಿಸಿದೆ. ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿ. ಬೇರೆಡೆ ಧರಣಿ ರ್ಯಾಲಿ ನಡೆಸದಂತೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವಿಭಾಗೀಯ ಪೀಠ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಾರಿಗೆ-ಸಂಚಾರ ಹಾಗೂ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ತಾಕೀತು ಮಾಡಿತು.ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ತಗುಲಿತು. ಜನಸಾಮಾನ್ಯರು ಓಡಾಡುವುದು ಹೇಗೆ? ಎಂದು ಪ್ರಶ್ನಿಸಿದ ಹೈಕೋರ್ಟ್​ ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಿ ಎಂದು​ ಸರ್ಕಾರಕ್ಕೆ ಸೂಚನೆ ನೀಡಿತು. ಹಿಂದಿನಿಂದಲೂ ಪ್ರತಿಭಟನೆಗಳಿಂದ ಟ್ರಾಫಿಕ್ ಜಾಮ್ ಆಗುತ್ತಿದೆ. ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ನಿಗದಿದ ಸ್ಥಳ ಬಿಟ್ಟು ಬೇರೆಡೆ ಪ್ರತಿಭಟನೆಗೆ ಅವಕಾಶ ಬೇಡ ಯಾವುದೇ ಸಂಘಟನೆಗಳು ಪಕ್ಷಗಳಿಗೆ ಅವಕಾಶ ನೀಡುವುದು ಬೇಡ ಎಂದು ತಿಳಿಸಿದೆ. : - – - …. . , 3, 2022 (..): , , ’ , . .. . . . “, ? .: / / /