ತರಬೇತಿ ವಿಮಾನ ಪತನ: ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಸಾವು. ತೆಲಂಗಾಣ,ಫೆಬ್ರವರಿ,26,2022(..):ತರಬೇತಿ ವಿಮಾನ ಪತನವಾಗಿ ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವಿಗೀಡಾಗಿದ್ದಾರೆ. ಈ ತರಬೇತಿ ವಿಮಾನವು ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ ಸಮೀಪ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಆಡಳಿತ, ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. : - –-