ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡಲು ವಿದೇಶಾಂಗ ಸಚಿವ ಜೈಶಂಕರ್ ಗೆ ಸಿಎಂ ಬೊಮ್ಮಾಯಿ ಮನವಿ ಬೆಂಗಳೂರು,ಫೆಬ್ರವರಿ,25,2022(..):ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಯುದ್ಧ ಸಾರಿರುವ ಹಿನ್ನೆಲೆ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಿಸಿ ವಾಪಸ್ ಕರೆತರಲು ಮುಂದಾಗುವಂತೆ ವಿದೇಶಾಂಗ ಸಚಿವ ಜೈ ಶಂಕರ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಮನವಿ ಮಾಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರುವ ಬಗ್ಗೆ ಸಿಎಂಗೆ ವಿದೇಶಾಂಗ ಸಚಿವ ಜೈ ಶಂಕರ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ. : -- -