ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ. ಹಾಸನ,ಫೆಬ್ರವರಿ,24,2022(..):ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೇಮಾವತಿ ನಗರದಲ್ಲಿ ಈ ಘಟನೆ ನಡೆದಿದೆ. ತಂದೆ ಸತ್ಯಪ್ರಕಾಶ್(54), ತಾಯಿ ಅನ್ನಪೂರ್ಣ (50) ಹಾಗೂ ಮಗ ಗೌರವ್ (21) ಆತ್ಮಹತ್ಯೆಗೆ ಶರಣಾದವರು. ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಕುರಿತು ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – .