ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೈಯ್ಯದ್ ಕೂರತ್ ತಂಙಳ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ ಬೆಂಗಳೂರು, ಜುಲೈ,8,2024 (..):ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರಾದ ಸೈಯ್ಯದ್ ಕೂರತ್ ತಂಙಳ್ ನಿಧನರಾಗಿದ್ದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. : , , ,