ಭಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ: ಸಚಿವ ಈಶ್ವರಪ್ಪ ಸೇರಿ ನೂರಾರು ಕಾರ್ಯಕರ್ತರು ಭಾಗಿ. ಶಿವಮೊಗ್ಗ,ಫೆಬ್ರವರಿ,21,2022(..):ನಿನ್ನೆ ತಡರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ ಇಂದು ಮರಾಠ ಸಂಪ್ರದಾಯದಂತೆ ನೆರವೇರಿತು. ಶಿವಮೊಗ್ಗ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ಹರ್ಷ ಅಂತ್ಯಕ್ರಿಯೆ ನೆರವೇರಿತು. ಹರ್ಷನ ಚಿತೆಗೆ ತಂದೆ ನಾಗರಾಜ್ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಅಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಜೈ ಶ್ರೀರಾಮ್, ಹರ್ಷ, ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದರು. ಇನ್ನು ಅಂತ್ಯಕ್ರಿಯೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿ ಹಲವರು ಪಾಲ್ಗೊಂಡಿದ್ದರು. : - - - .