ತನ್ನ ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ನಿಂದ ಹೋರಾಟ- ಸಚಿವ ಗೋವಿಂದ ಕಾರಜೋಳ ಟೀಕೆ ಬಾಗಲಕೊಟೆ,ಫೆಬ್ರವರಿ,19,2022(..):ಸಚಿವ ಸ್ಥಾನದಿಂದ ಕೆ.ಎಸ್ ಈಶ್ವರಪ್ಪ ಅವರನ್ನ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಜನರ ಸಮಸ್ಯೆಗಳಿಗೆ ಕಾಂಗ್ರೆಸ್ ಹೋರಾಟ ಮಾಡುತ್ತಿಲ್ಲ ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಿದೆ. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಗೆ ಗೊಂದಲ. ಇದೆ. ಕಾಂಗ್ರೆಸ್ ಗೆ ಆದ ನಷ್ಟ ತುಂಬಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಕುಟುಕಿದರು. ಹಾಗೆಯೇ ಂಆಡ್ತೆ ಸದನದಲ್ಲಿ ಜನರ ಸಮಸ್ಯ ಬಗ್ಗೆ ಚರ್ಚೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ವಿನಂತಿಸಿದರು. ಇನ್ನು ಆರ್ ಎಸ್ ಎಸ್ ನಿಂದ ಹಿಜಾಬ್ ವಿವಾದ ಸೃಷ್ಠಿ ಎಂದು ಆರೋಪಿಸಿದ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸಚಿವ ಗೋವಿಂದ ಕಾರಜೋಳ, ಸಿದ್ಧರಾಮಯ್ಯ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು. : ---