ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ ನಿಧನ ಕಲಬುರಗಿ,ಜುಲೈ,8,2024 (..):ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ(35) ಇಂದು ನಿಧನರಾಗಿದ್ದಾರೆ. ಇಂದು ಮುಂಜಾನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ ಸಿದ್ದರಾಮಶ್ರೀ ಅವರಿಗೆ ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಪಾಲ್ಗೊಂಡಿದ್ದರು. : , ,