ಅಹಮದಾಬಾದ್ ಸರಣಿ ಬಾಂಬ್ ಸ್ಪೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟ. ಅಹಮದಾಬಾದ್,ಫೆಬ್ರವರಿ,18,2022(..):2008ರಲ್ಲಿ ನಡೆದಿದ್ದ ಅಹಮದಾಬಾದ್ ಸರಣಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿ ಅಹಮದಾಬಾದ್ ವಿಶೇಷ ಕೊರ್ಟ್ ತೀರ್ಪು ನೀಡಿದೆ. 2008ರಲ್ಲಿ ಅಹಮದಾಬಾದ್ ನಲ್ಲಿ ನಡೆದಿದ್ಧ ಸರಣಿ ಬಾಂಬ್ ಸ್ಪೋಟದಲ್ಲಿ 56 ಮಂದಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ನ್ಯಾಯಾಲಯವು ವಾದ ಪ್ರತಿವಾದಗಳನ್ನ ಆಲಿಸಿ ಇಂದಿಗೆ ತೀರ್ಪು ಪ್ರಕಟಕ್ಕೆ ದಿನಾಂಕ ನಿಗದಿ ಮಾಡಿತ್ತು. ಇದೀಗ ಅಡಿ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ಮರಣದಂಡನೆ ಮತ್ತು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. : – –-