ಪಿಯು ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಣೆ ಬೆಂಗಳೂರು,ಫೆಬ್ರವರಿ,12,2022(..):ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ವಿವಾದದಿಂದಾಗಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಈ ಮಧ್ಯೆ ಪಿಯು ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ. ಹಿಜಾಬ್ ವಿವಾದದಿಂದಾಗಿ ಈಗಾಗಲೇ ಪದವಿ ಕಾಲೇಜುಗಳಿಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆಯನ್ನು ಘೋಷಿಸಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 12, 13 ರ ಭಾನುವಾರ ರಜಾ ದಿನ ಸಹಿತವಾಗಿ ಫೆಬ್ರವರಿ 14, 15ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ ತಿಳಿಸಿದೆ. : - –